ಇಂದಿನಿಂದ ಗೃಹಜ್ಯೋತಿ ಯೋಜನೆ ಪ್ರಾರಂಭ- ಸಿಎಂ ಸಿದ್ದರಾಮಯ್ಯ ಮಾಹಿತಿ. ಬೆಂಗಳೂರು, ಜುಲೈ,1,2023(..):ಗೃಹಜ್ಯೋತಿ ಇಂದಿನಿಂದ ಪ್ರಾರಂಭವಾಗುತ್ತಿದ್ದು, ಈ ತಿಂಗಳು ಉಚಿತವಾಗಿ ವಿದ್ಯುತ್ ನೀಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ‍್ಧರಾಮಯ್ಯ, ಗೃಹಜ್ಯೋತಿ ಯೋಜನೆಯ ಬಿಲ್ ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣ ಈ ತಿಂಗಳು 10 ರ ನಂತರ ಪ್ರಾರಂಭ ಮಾಡುತ್ತೇವೆ. ಜುಲೈ ತಿಂಗಳಲ್ಲಿ ಅಕ್ಕಿ ಬದಲಿಗೆ ದುಡ್ಡನ್ನು ಒಂದನೇ ತಾರೀಖು ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು ಎಂದರು. ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ ನಡೆಯುತ್ತಿರುವ ಬಗ್ಗೆ ಮಾತನಾಡಿ ವಿರೋಧ ಪಕ್ಷ ಅವರ ಒಳಜಗಳವನ್ನು ಮೊದಲು ಸರಿಪಡಿಸಿಕೊಳ್ಳಲಿ ಎಂದರು. : – – –