ಸಿ.ಟಿ ರವಿ ಮೊದಲು ತಮ್ಮ ಪಂಚೆಯನ್ನ ಸರಿ ಮಾಡಿಕೊಳ್ಳಲಿ- ಸಚಿವ ಚಲುವರಾಯಸ್ವಾಮಿ ಟಾಂಗ್. ಮೈಸೂರು,ಜುಲೈ,1,2023(..):ಸಿದ್ದರಾಮಯ್ಯ, ಡಿಕೆ​​ ಶಿವಕುಮಾರ್ ಪಂಚೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಟಾಂಗ್ ನೀಡಿರುವ ಕೃಷಿ ಸಚಿವ ಎನ್​​​.ಚಲುವರಾಯಸ್ವಾಮಿ, ಮೊದಲು ಸಿ.ಟಿ.ರವಿ ತಮ್ಮ ಪಂಚೆಯನ್ನು ಸರಿ ಮಾಡಿಕೊಳ್ಳಲಿ ಎಂದು ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಚೆಲುವರಾಯಸ್ವಾಮಿ, ಹೀಗೆ ಮಾತನಾಡಿದ್ದಕ್ಕೆ ಚುನಾವಣೆಯಲ್ಲಿ ಜನ ಉತ್ತರಕೊಟ್ಟಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಉತ್ತರವೇ ಅಂತಿಮ. ಕೇವಲ 65 ಸ್ಥಾನಕ್ಕೆ ಕುಸಿದಿರುವ ಬಿಜೆಪಿಯಲ್ಲಿ ಕಚ್ಚಾಟ ಇಲ್ಲವೇ?. ಡಿ.ಕೆ.ಶಿವಕುಮಾರ್​​ ಹಾಗೂ ಸಿದ್ದರಾಮಯ್ಯ ಏನು ಕಿತ್ತಾಡುತ್ತಿದ್ದಾರೆ? ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಕ್ಕೆ ಜನರು ಉತ್ತರ ಕೊಟ್ಟಿದ್ದಾರೆ ಎಂದು ಕಿಡಿಕಾರಿದರು. ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ಮತ್ತೊಂದು ಟೋಲ್ ಸಂಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಚಲುವರಾಯಸ್ವಾಮಿ, ಇದು ಕೇಂದ್ರದ ಉದ್ಧಟತನ. ಈಗಾಗಲೇ ಟೋಲ್ ಕಟ್ಟದಂತೆ ಕರೆ ನೀಡಲಾಗಿದೆ. ಟೋಲ್ ಸಂಗ್ರಹ ವಿರೋಧಿ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಟೋಲ್ ಸಮಸ್ಯೆ ಬಗ್ಗೆ ಸಿಎಂ ಗಮನಕ್ಕೆ ತರಲಾಗಿದೆ. ಜನರಿಗೆ ಟೋಲ್ ಕಟ್ಟದಂತೆ ಕರೆ ನೀಡಲಾಗಿದೆ ಎಂದರು. : - – - - .