ವಿರೋಧ ಪಕ್ಷದ ನಾಯಕ ಯಾರು ಅಂತಾ ನಾಳೆ ತಿಳಿಯಲಿದೆ- ಮಾಜಿ ಸಿಎಂ ಬಸವರಾಜ ಬೊಮ್ಮಾಯಿ. ಚಿಕ್ಕಮಗಳೂರು,ಜುಲೈ,1,2023(..):ಜುಲೈ 3 ರಿಂದ ರಾಜ್ಯ ವಿಧಾನಸಭಾ ಅಧಿವೇಶನ ಪ್ರಾರಂಭವಾಗಲಿದ್ದು ಇದಕ್ಕೂ ಮುನ್ನ ವಿಪಕ್ಷ ನಾಯಕರ ಆಯ್ಕೆಯಾಗಬೇಕಿದೆ. ಈ ಕುರಿತು ಚಿಕ್ಕಮಗಳೂರಿನಲ್ಲಿ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಯಾರು ಎಂದು ನಾಳೆ ಗೊತ್ತಾಗಲಿದೆ ಎಂದು ಹೇಳಿದ್ದಾರೆ. ಮಾಜಿ ಸಚಿವ ಆರ್​.ಅಶೋಕ್ ಹುಟ್ಟುಹಬ್ಬಕ್ಕಾಗಿ ಇಲ್ಲಿಗೆ ಬಂದಿದ್ದೇವೆ. ಸಮಯ ಸಿಕ್ತು, ಹಾಗಾಗಿ ಹುಟ್ಟುಹಬ್ಬ ಆಚರಿಸಲು ಬಂದಿದ್ದೇವೆ. ಹುಟ್ಟುಹಬ್ಬ ಆಚರಣೆ ಮಾಡಿ ಈಗ ವಾಪಸ್ ತೆರಳುತ್ತಿದ್ದೇವೆ ಎಂದು ಹೇಳಿದರು. : – - - .