ಸಿಡಿಗೆ ತಡೆಯಾಜ್ಞೆ ತರದವರು, ಆರ್​​ಎಸ್​ಎಸ್​​ ಕೈಗೊಂಬೆಯಾಗದ ವಿಪಕ್ಷ ನಾಯಕ ಬೇಕಾಗಿದ್ದಾರೆ- ಬಿಜೆಪಿ ಕಾಲೆಳೆದ ಕಾಂಗ್ರೆಸ್. ಬೆಂಗಳೂರು,ಜುಲೈ,1,2023(..):ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳೇ ಕಳೆದಿದ್ದರೂ ಬಿಜೆಪಿ ಇನ್ನೂ ವಿಪಕ್ಷ ನಾಯಕರನ್ನ ನೇಮಕ ಮಾಡದ ಹಿನ್ನೆಲೆ ಟ್ವೀಟ್​ ಮೂಲಕ ರಾಜ್ಯ ಕಾಂಗ್ರೆಸ್​​ ಬಿಜೆಪಿ ನಾಯಕರ ಕಾಲೆಳೆದಿದೆ. ಈ ಕುರಿತು ಟ್ವೀಟ್ ಮಾಡಿದ ಕಾಂಗ್ರೆಸ್, ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ. ಸಂವಿಧಾನ ತಿಳಿದವರು, ಪ್ರಜಾಪ್ರಭುತ್ವ ಅರಿತವರು ಬೇಕಾಗಿದ್ದಾರೆ. ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ಬೇಕಾಗಿದ್ದಾರೆ. ಆರ್​​ಎಸ್​ಎಸ್​​ ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು, ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನ ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಟಾಂಗ್ ನೀಡಿದೆ. : – - - – .