ಬಹಿರಂಗ ಹೇಳಿಕೆ ಹಿನ್ನೆಲೆ: ಎಂ.ಪಿ ರೇಣುಕಾಚಾರ್ಯ ಸೇರಿ ಕೆಲ ಮುಖಂಡರಿಗೆ ನೋಟಿಸ್. ಬೆಂಗಳೂರು,ಜೂನ್,29,2023(..):ಬಹಿರಂಗವಾಗಿ ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿರುವ ಆರೋಪದ ಮೇಲೆ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಸೇರಿ ಕೆಲ ನಾಯಕರಿಗೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು ಹಿನ್ನೆಲೆ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಸ್ವಪಕ್ಷದ ನಾಯಕರ ವಿರುದ್ದವೇ ಗುಡುಗಿದ್ದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರಾಜೀನಾಮೆಗೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಎಂ.ಪಿ ರೇಣುಕಾಚಾರ್ಯ , ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಕೆಲವರಿಗೆ ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್‌ ಜಾರಿ ಮಾಡಿದೆ. : - – - - .