ಗ್ರೇಡ್ 2 ತಹಶೀಲ್ದಾರ್ ಅನುಮಾನಸ್ಪದ ಸಾವು: ಕುಟುಂಬಸ್ಥರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಂತ್ವನ. ಬೆಳಗಾವಿ,ಜೂನ್,29,2023(..):ಬೆಳಗಾವಿ ಎಸಿ ಕಚೇರಿಯ ಗ್ರೇಡ್- 2 ತಹಶೀಲ್ದಾರ್ ‌ಅಶೋಕ್ ಮಣ್ಣಿಕೇರಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ಅಶೋಕ್ ಮಣ್ಣಿಕೇರಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಶಿಫ್ಟ್ ಮಾಡಲಾಗಿದೆ. ಬೆಳಗಾವಿಯ ವೈಬವ್ ನಗರ ಪಾರ್ಥೀವ ಶರೀರ ಇಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಸೇರಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಶೋಕ್ ಮಣ್ಣಿಕೇರಿ ಈ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್​ ಮೊದಲ ಬಾರಿಗೆ ಶಾಸಕರಾಗಿದ್ದ ವೇಳೆ ಅವರ ಆಪ್ತ ಕಾರ್ಯದರ್ಶಿಯಾಗಿ ಅಶೋಕ್ ಮಣ್ಣಿಕೇರಿ ಕಾರ್ಯನಿರ್ವಹಿಸಿದ್ದರು. ‌ ಅಶೋಕ್ ಮಣ್ಣಿಕೇರಿ ಅವರಿಗೆ ತಡರಾತ್ರಿ ಹೃದಯಾಘಾತವಾಗಿದೆ ಎಂದು ಅವರನ್ನು ಪತ್ನಿ ಭೂಮಿ ಹಾಗೂ ಆಕೆಯ ಸಹೋದರ ಸ್ಯಾಮ್ಯುಯೆಲ್ ಅವರು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದ್ರೆ, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯೇ ಅಶೋಕ್ ಮಣ್ಣಿಕೇರಿ ಕೊನೆಯುಸೆರೆಳೆದಿದ್ದಾರೆ ಎನ್ನಲಾಗಿದೆ. : 2- –- - - -