ಕೇಂದ್ರದಿಂದ ಬಡವರ ಹೊಟ್ಟೆ ಮೇಲೆ ಕಲ್ಲು ಹಾಕುವ ಕೆಲಸ-ಸಿಎಂ ಸಿದ್ಧರಾಮಯ್ಯ ವಾಗ್ದಾಳಿ. ಬೆಂಗಳೂರು,ಜೂನ್,28,2023(..):ನಾವು ದುಡ್ಡು ಕೊಡ್ತೀವಿ ಅಂದರೂ ಕೇಂದ್ರ ಸರ್ಕಾರ ಅಕ್ಕಿ ಕೊಡ್ತಿಲ್ಲ. ಕೇಂದ್ರ ಸರ್ಕಾರ ಅಕ್ಕಿಇಟ್ಟುಕೊಂಡು ನಮಗೆ ದ್ರೋಹ ಮಾಡಿದೆ. ಬಡವರ ಹೊಟ್ಟೆ ಮೇಲೆ ಕಲ್ಲು ಹಾಕುವ ಕೆಲಸ ಮಾಡುತ್ತಿದೆ ಎಂದು ಸಿಎಂ ಸಿದ‍್ಧರಾಮಯ್ಯ ವಾಗ್ದಾಳಿ ನಡೆಸಿದರು. ಸಚಿವ ಸಂಪುಟ ಸಭೆಯಲ್ಲಿ 5 ಕೆಜಿ ಅಕ್ಕಿ ಬದಲಾಗಿ 170 ರೂ ಹಣ ನೀಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಹಣ ಕೊಡುತ್ತೇವೆ ಎಂದರೂ ಕೇಂದ್ರ ಅಕ್ಕಿ ಪೂರೈಸಲು ಕೇಂದ್ರದವರು ಸಿದ್ಧರಿಲ್ಲ. ಬಡವರ ಕಾರ್ಯಕ್ರಮಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಆಹಾರ ಸಚಿವ ಮುನಿಯಪ್ಪ ಗೋಯಲ್​ರನ್ನು ಭೇಟಿ ಮಾಡಿದ್ದರು. ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅಕ್ಕಿ ಇಲ್ಲ ಎಂದಿದ್ದಾರೆ. ನಾನೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಮನವಿ ಮಾಡಿದ್ದೆ. ಆಹಾರ ಸಚಿವ ಪಿಯೂಷ್ ಗೋಯಲ್ ​ಗೆ ಹೇಳುತ್ತೇನೆ ಎಂದಿದ್ದರು. ನಂತರ ಗೋಯಲ್ ಅವರನ್ನು ಮುನಿಯಪ್ಪ ಭೇಟಿಯಾಗಿ ಮನವಿ ಮಾಡಿದ್ದರು. ರಾಜ್ಯಕ್ಕೆ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದು ಗೋಯಲ್​ ಹೇಳಿದ್ದರು. ಕೇಂದ್ರ ಅಕ್ಕಿಯನ್ನ ಟೆಂಡರ್ ಮೂಲಕ ವಿತರಿಸುತ್ತಿದೆ. ಆದರೆ ಆ ಟೆಂಡರ್ ನಲ್ಲಿ ಭಾಗಿಯಾಗಲು ರಾಜ್ಯಗಳಿಗೆ ಅವಕಾಶವಿಲ್ಲ. ಬಿಜೆಪಿ ಬಡವರ ವಿರೋಧಿ ಅನ್ನೋದು ಸಾಬೀತಾಗಿದೆ ಎಂದು ಗುಡುಗಿದರು. ಜುಲೈ 1ರಿಂದ 10 ಕೆಜಿ ಆಹಾರ ಧಾನ್ಯ ನೀಡುವುದಾಗಿ ಭರವಸೆ ನೀಡಿದ್ದೆವು. ಜನರಿಗೆ ನಾವು ನೀಡಿದ ಭರವಸೆಯಂತೆ ಹಣ ನೀಡಲು ನಿರ್ಧರಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. : - – –-