ಬಿಜೆಪಿ ಸರ್ಕಾರದ ಅವಧಿಯಲ್ಲಿನ ಎಲ್ಲಾ ಹಗರಣಗಳ ಬಗ್ಗೆ ತನಿಖೆಗೆ ತೀರ್ಮಾನ- ಸಿಎಂ ಸಿದ್ಧರಾಮಯ್ಯ. ಹಾಸನ,ಜೂನ್,27,2023(..):ಬಿಜೆಪಿ ಸರ್ಕಾರದ ಅವಧಿಯಲ್ಲಿನ ಎಲ್ಲಾ ಹಗರಣಗಳ ಬಗ್ಗೆ ತನಿಖೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು. ಹಾಸನದಲ್ಲಿ ಇಂದು ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಕೊರೊನಾ ವೇಳೆ ಮೆಡಿಕಲ್ ವಸ್ತುಗಳ ಖರೀದಿಯಲ್ಲಿ ಅವ್ಯವಹಾರ, 40% ಕಮಿಷನ್ ಆರೋಪ, ಬಿಟ್ ಕಾಯಿನ್ ಅವ್ಯವಹಾರ, ಚಾಮರಾಜನಗರದ ಆಕ್ಸಿಜನ್​ ದುರಂತದ ಬಗ್ಗೆ ಎಲ್ಲಾ ಹಗರಣಗಳ ಬಗ್ಗೆ ತನಿಖೆಯಾಗಲಿದೆ ಎಂದರು. ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ಪೂರೈಕೆ ಮಾಡದ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ಧರಾಮಯ್ಯ, ಹಣ ಕೊಡ್ತೀವಿ ಅಂದ್ರೂ ಕೇಂದ್ರ ಸರ್ಕಾರ ಅಕ್ಕಿ ಪೂರೈಸುತ್ತಿಲ್ಲ. ಕೇಂದ್ರ ಸರ್ಕಾರವೇನು ಪುಕ್ಕಟೆಯಾಗಿ ರಾಜ್ಯಕ್ಕೆ ಅಕ್ಕಿ ಪೂರೈಸಲ್ಲ. ಬಡವರ ಮೇಲೂ ಗದಾಪ್ರಹಾರ ಮಾಡಲು ಹೊರಟಿದ್ದಾರೆ. ನಾವು ಈಗ ಬೇರೆ ಕಡೆಯಿಂದ ಅಕ್ಕಿ ಖರೀದಿಸಲು ಪ್ರಯತ್ನ ಮಾಡ್ತಿದ್ದೇವೆ. ಈ ಕುರಿತು ನಾಳೆ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದರು. : – - - - .