ನಟ ದರ್ಶನ್ ಗೆ ರಾಜಾತಿಥ್ಯ: ಸಂಪೂರ್ಣ ವರದಿ ನೀಡುವಂತೆ ಡಿಜಿ&ಐಜಿಪಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ಬೆಂಗಳೂರು,ಆಗಸ್ಟ್,26,2024 (..):ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರವನ್ನ ಗಂಭೀರವಾಗಿ ಪರಿಗಣಿಸಿರುವ ಸಿಎಂ ಸಿದ್ದರಾಮಯ್ಯ ಇದೀಗ ಈ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಗೆ ಸೂಚನೆ ನೀಡಿದರು. ಈ ಸಂಬಂಧ ಇಂದು ಸಿಎಂ ನಿವಾಸ ಕಾವೇರಿಗೆ ಭೇಟಿ ನೀಡಿದ ಡಿಜಿ&ಐಜಿಪಿ ಅಲೋಕ್ ಮೋಹನ್, ನಟ ದರ್ಶನ್ ಗೆ ರಾಜಾತಿಥ್ಯ ವಿಚಾರದಲ್ಲಿ 7 ಜೈಲು ಸಿಬ್ಬಂದಿ ಸಸ್ಪೆಂಡ್ ಕುರಿತು ಮಾಹಿತಿಯನ್ನ ಸಿಎಂ ಸಿದ್ದರಾಮಯ್ಯಗೆ ನೀಡಿದರು. ಈ ವೇಳೆ ಕಾರಾಗೃಹಕ್ಕೆ ಭೇಟಿ ನೀಡಿ ಸಂಪೂರ್ಣ ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಅಲ್ಲದೆ ನಿಯಮ ಉಲ್ಲಂಘಿಸಿದ ಜೈಲು ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು. ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸುವಂತೆ ಡಿಜಿ&ಐಜಿಪಿ ಅಲೋಕ್ ಮೋಹನ್ ಗೆ ಸೂಚಿಸಿದರು. : , , , &,