ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ: ಸದ್ಯಕ್ಕೆ ಕಟೀಲ್ ತೆಗೆಯುವ ಸಂದರ್ಭ ಕಾಣುತ್ತಿಲ್ಲ- ಆರ್.ಅಶೋಕ್. ಚಿಕ್ಕಮಗಳೂರು,ಜೂನ್,24,2023(..):ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಹರಡಿದ ಹಿನ್ನೆಲೆ ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಚಿವ ಆರ್.ಅಶೋಕ್, ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ. ಸದ್ಯಕ್ಕೆ ಕಟೀಲ್ ತೆಗೆಯುವ ಸಂದರ್ಭ ಕಾಣುತ್ತಿಲ್ಲ ಎಂದು ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಆರ್.ಅಶೋಕ್, ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ ರಾಜ್ಯಾಧ್ಯಕ್ಷರಾಗಿ ನಳೀನ್ ಕುಮಾರ್ ಕಟೀಲ್ ಇದ್ದಾರೆ. ನಮ್ಮದು ರಾಷ್ಟ್ರೀಯ ಪಕ್ಷ. ಹೀಗಾಗಿ ರಾಜೀನಾಮೆಯನ್ನ ವರಿಷ್ಠರು ಅಂಗೀಕಾರ ಮಾಡಬೇಕಲ್ಲವಾ..? ಲೋಕಸಭೆ ಚುನಾವಣೆ ಇದೆ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಗೊತ್ತಿಲ್ಲ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಯಾಕೆ ನನಗೆ ಕೊಡಲ್ಲ ಎಂಬ ಮಾಜಿ ಸಚಿವ ವಿ.ಸೋಮಣ್ಣ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಆರ್.ಅಶೋಕ್, ಸೋಮಣ್ಣ ಹೇಳಿಕೆ ಬಗ್ಗೆ ಗೊತ್ತಿಲ್ಲ. ಸದ್ಯ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು. : –- - – . .