ಜೂ.27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ. ಮೈಸೂರು,ಜೂನ್,24,2023(..):ಗೃಹಲಕ್ಷ್ಮೀ ಯೋಜನೆ ಜಾರಿ ತಡವಾಗುತ್ತಿಲ್ಲ. ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಆ್ಯಪ್​ ತಯಾರಾಗಿದೆ. ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ. ಜೂ.27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದರು. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಾವತಿಸಬಾರದು. ಆಗಸ್ಟ್​ 16 ಅಥವಾ 17ರಂದು ಮನೆ ಯಜಮಾನಿ ಖಾತೆಗೆ ಹಣ ತಲುಪುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ. : - – – -