ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದಾಗಿ ಹೇಳಿಲ್ಲ- ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ. ಮಂಗಳೂರು,ಜೂನ್,24,2023(..):ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದಾಗಿ ಹೇಳಿಲ್ಲ. ನನ್ನ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಳೀನ್ ಕುಮಾರ್ ಕಟೀಲ್, ನನ್ನ ರಾಜ್ಯಾಧ್ಯಕ್ಷ ಅವಧಿ ಮುಗಿದಿದೆ. ಬೇರೆಯವರನ್ನ ಆಯ್ಕೆ ಮಾಡಿ ಎಂದಿದ್ದೇನೆ. ಚುನಾವಣೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ಬಿಟ್ಟಿದ್ದೇನೆ ನಾನು ರಾಜೀನಾಮೆ ಕೊಟ್ಟಿಲ್ಲ ಎಂದರು. ರಾಜೀನಾಮೆ ವಿಚಾರ ಸತ್ಯಕ್ಕೆ ದೂರವಾದ ಮಾತು. ಅಧ್ಯಕ್ಷರ ಆಯ್ಕೆ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ನಳೀನ್ ಕುಮಾರ್ ಕಟೀಲ್ ತಿಳಿಸಿದರು. : - – – - - .