ಬಿಬಿಎಂಪಿ ಚುನಾವಣೆ ಮಾಡಲೇಬೇಕು: ಯಾರೂ ತಪ್ಪಿಸಿಕೊಳ್ಳಲು ಆಗಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್. ಬೆಂಗಳೂರು,ಜೂನ್,24,2023(..):ಬಿಬಿಎಂಪಿ ಚುನಾವಣೆ ಮಾಡಲೇಬೇಕು. ಚುನಾವಣೆಯಿಂದ ತಪ್ಪಿಸಿಕೊಳ್ಳಲು ಆಗಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಕೋರ್ಟ್ ನಿರ್ದೇಶನ ಪಾಲನೆ ಮಾಡಬೇಕು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಿಬಿಎಂಪಿ ಚುನಾವಣೆ ಮಾಡುತ್ತೇವೆ. ಚುನಾವಣೆ ಮಾಡಲೇಬೇಕು, ಯಾರೂ ತಪ್ಪಿಸಿಕೊಳ್ಳಲು ಆಗಲ್ಲ. ವಾರ್ಡ್ ಎಷ್ಟಿರಲಿದೆ ಎಂದು ಈಗಲೇ ಹೇಳಲು ಆಗಲ್ಲ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಯನ್ನೂ ಮಾಡುತ್ತೇವೆ ಎಂದು ತಿಳಿಸಿದರು. ಜೂನ್ 28 ರಂದು ಅಕ್ಕಿ ಬಗ್ಗೆ ತೀರ್ಮಾನ ಮಾಡುತ್ತೇವೆ. ಸಚಿವ ಸಂಪುಟ ಸಭೆಯಲ್ಲಿ ಅನ್ನಭಾಗ್ಯ ಯೋಜನೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು. : - -- .