ರಾಜ್ಯದ ಜನರ ಹಿತದೃಷ್ಠಿಯಿಂದ ಕೇಂದ್ರ ಸರ್ಕಾರವೇ ಅಕ್ಕಿ ಕೊಡಬೇಕು- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಬೆಂಗಳೂರು,ಜೂನ್,24,2023(..):ಹೆಚ್ಚುವರಿ ಅಕ್ಕಿ ನೀಡಲು ಈಗಾಗಲೇ ಕೇಂದ್ರ ಸರ್ಕಾರ ನಿರಾಕರಿಸಿದ್ದು ಈ ಹಿನ್ನೆಲೆಯಲ್ಲಿ ಏಜೆನ್ಸಿಗಳ ಮೂಲಕ ಅಕ್ಕಿ ಖರೀದಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಜನರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರವೇ ಅಕ್ಕಿ ಕೊಡಬೇಕು ಎಂದಿದ್ದಾರೆ. ಹೆಚ್ಚುವರಿ ಅಕ್ಕಿ ವಿಚಾರವನ್ನ ಕೇಂದ್ರ ಸರ್ಕಾರ ಈ ವಿಚಾರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ನಾವೇನು ಸುಮ್ಮನೆ ಅಕ್ಕಿ ಕೇಳುತ್ತಿಲ್ಲ, ಹಣ ಕೊಡುತ್ತೇವೆ. ಜನರ ಹಿತದೃಷ್ಟಿಯಿಂದ ಅಕ್ಕಿ ಕೊಡಬೇಕಾದ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಸುಮ್ಮನೆ ರಾಜಕೀಯ ಮಾಡುತ್ತಿದೆ. ಸಂಕಷ್ಟದಲ್ಲಿರುವ ಬೇರೆ ದೇಶಗಳಿಗೆ ನಾವು ನೆರವು ನೀಡುತ್ತೇವೆ. ಆದರೆ ಇಲ್ಲಿನ ಜನರಿಗೆ ಕೊಡಲಿಲ್ಲ ಅಂದರೆ ಹೇಗೆ ಎಂದು ಪ್ರಶ್ನಿಸಿದರು. : - – – - - .