ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆ. ಬಳ್ಳಾರಿ,ಜೂನ್,24,2023(..):ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಹಿನ್ನೆಲೆ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ ಎಂದು ನಳೀನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ. ಬಳ್ಳಾರಿಯಲ್ಲಿ ಇಂದು ಮಾತನಾಡಿದ ನಳೀನ್ ಕುಮಾರ್ ಕಟೀಲ್, ನಾನು ಈಗಾಗಲೇ ರಾಜೀನಾಮೆ ನೀಡಿದ್ದೇನೆ. ಚುನಾವಣೆಯ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ನೀಡಲಾಗಿದೆ ಎಂದರು. ನನ್ನ ಅವಧಿ ಮುಗಿದಿದೆ. ಎರಡು ಅವಧಿ ಮುಗಿಸಿದ್ದೇನೆ. ಹೀಗಾಗಿ ಬದಲಾವಣೆ ಸಹಜ . ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ವಿ.ಸೋಮಣ್ಣ ಕೇಳುವುದರಲ್ಲಿ ತಪ್ಪಿಲ್ಲ ಎಂದು ನಳೀನ್ ಕುಮಾರ್ ಕಟೀಲ್ ತಿಳಿಸಿದರು. : - – - .