ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ –ಜೆಡಿಎಸ್ ಮೈತ್ರಿ ಸುಳಿವು ನೀಡಿದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್. ರಾಮನಗರ,ಜೂನ್,23,2023(..):ಈ ಬಾರಿಯ ವಿಧಾನಸಭೆ ಚುನಾವಣೆ ಸೋಲನುಭವಿಸಿರುವ ರಾಜ್ಯ ಬಿಜೆಪಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಳೆದ ಬಾರಿಯಂತೆ ಹೆಚ್ಚು ಸ್ಥಾನಗಳನ್ನ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ತಂತ್ರ ಹೆಣೆಯಲು ಯೋಚಿಸುತ್ತಿದೆ. ಈ ನಡುವೆ ಬಿಜೆಪಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಲೋಕಸಭಾ ಚುನಾವಣೆಗೆ ಹೋಗಲು ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆಯೊಂದನ್ನ ನೀಡಿದ್ದಾರೆ. ಹೌದು, ಈ ಕುರಿತು ರಾಮನಗರದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್, ರಾಜ್ಯ ರಾಜಕಾರಣದಲ್ಲಿ ಮುಂದೆ ಮಹತ್ವದ ಬದಲಾವಣೆಯಾಗಬಹುದು. ಜೆಡಿಎಸ್ ಜೊತೆ ಹೊಂದಾಣಿಕೆ ಆಗಬಹುದು. ಬದಲಾವಣೆ ಜೊತೆ ಚುನಾವಣೆ ಎದುರಿಸುತ್ತೇವೆ. ಜೆಡಿಎಸ್ ಜತೆ ಮೈತ್ರಿ ಆಗಬಹುದು ಅಂದಿಕೊಂಡಿದ್ದೇನೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ತಯಾರಿ ಆಗಲೇಬೇಕು. ಅತಿ ಹೆಚ್ಚು ಸಂಸದರನ್ನ ಲೋಕಸಭೆಗೆ ಕಳುಹಿಸಬೇಕು. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹೇಳಿದರೇ ಸ್ಪರ್ಧಿಸುತ್ತೇನೆ. ಲೋಕಸಭೆ ಟಿಕೆಟ್​ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ. : – –- - - – - .