ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಲು ಆಗದಿದ್ರೆ ಅಧಿಕಾರ ಬಿಟ್ಟು ತೊಲಗಲಿ-ಮಾಜಿ ಸಿಎಂ ಬಿಎಸ್ ವೈ ವಾಗ್ದಾಳಿ. ದಾವಣಗೆರೆ,ಜೂನ್,22,2023(..)ರಾಜ್ಯ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿ ಮಾಡಲು ಆಗದಿದ್ದರೇ ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಜನರನ್ನು ಮರಳು ಮಾಡಲು ಕಾಂಗ್ರೆಸ್ ದಿನಕ್ಕೊಂದು ನಾಟಕ ಆಡ್ತಿದೆ. ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನ ಕೇಳಿ ಜನರಿಗೆ ಭರವಸೆ ಕೊಟ್ಟಿದ್ರಾ?. ಚುನಾವಣೆಯಲ್ಲಿ ಗೆಲ್ಲಬೇಕೆಂದು ಕಾಂಗ್ರೆಸ್​ನವರೇ ಭರವಸೆ ಕೊಟ್ಟಿದ್ದಾರೆ ಎಂದು ಕಿಡಿಕಾರಿದರು. ಕೇಂದ್ರ ಸರ್ಕಾರ ಈಗಾಗಲೇ ತಲಾ 5 ಕೆಜಿ ಅಕ್ಕಿ‌ ಕೊಡುತ್ತಿದೆ. ಜನರಿಗೆ ಭರವಸೆ ಕೊಟ್ಟಂತೆ ಸಿದ್ದರಾಮಯ್ಯ 10 ಕೆಜಿ ಅಕ್ಕಿ ಕೊಡಬೇಕು. 10 ಕೆಜಿ ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಬಿಎಸ್ ವೈ ಹರಿಹಾಯ್ದರು. : - -, – - -