ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್ಡಿಕೆ ವಾಗ್ಧಾಳಿ ಬೆಂಗಳೂರು, ಜೂನ್ 21, 2023 (..):ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್ ಹಗರಣದ ಬಗ್ಗೆ ತನಿಖೆ ನಡೆದ್ರೆ ಯಾರ್ಯಾರು ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕುಹಕವಾಡಿದ್ದಾರೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸುವ ಮುನ್ನ ಸರ್ವರ್ ಸ್ತ್ರಾಂಗ್ ಮಾಡಿಕೊಳ್ಳಬೇಕು ಎಂಬುದು ಗೊತ್ತಿಲ್ವಾ..? ಇವರೆಲ್ಲಾ ನಮ್ಮ ಮಂತ್ರಿಗಳು..? ಬಾಯಿ ಚಪಲಕ್ಕೆ ಮಾತ್ರ ಮಾತನಾಡುತ್ತಾರೆ ಎಂದು ಎಚ್ಡಿಕೆ ವ್ಯಂಗ್ಯವಾಡಿದ್ದಾರೆ. ಎಲ್ಲೆಡೆ ವಿದ್ಯುತ್ ಬಿಲ್ ಸಮಸ್ಯೆ ಉಂಟಾಗಿದೆ. ಇಷ್ಟೆಲ್ಲ ಆದರೂ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಕಿಡಿಕಾರಿದ್ದಾರೆ.