ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು, ಜೂನ್ 21, 2023 (..):ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಹೆಚ್ಚಿನ ಮಳೆಯಾಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕೋಲಾರ, ಮಂಡ್ಯ,ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕಳೆದ ವಾರ ಗುಜರಾತ್ ಕರಾವಳಿಗೆ ಅಪ್ಪಳಿಸಿದ ಚಂಡಮಾರುತ ಬಿಪೋರ್​ಜಾಯ್ ಕರ್ನಾಟಕದಲ್ಲಿ ನೈಋತ್ಯ ಮಾನ್ಸೂನ್ ಪ್ರಗತಿಯ ಮೇಲೆ ಪರಿಣಾಮ ಬೀರಿದೆ.