ಗ್ಯಾರಂಟಿ ಯೋಜನೆ ಅರ್ಜಿ ಸಲ್ಲಿಕೆಗೆ ಸಮಸ್ಯೆ: ಕೇಂದ್ರ ಸರ್ಕಾರ ಸರ್ವರ್ ಹ್ಯಾಕ್ ಮಾಡಿದೆ- ಸಚಿವ ಸತೀಶ್ ಜಾರಕಿಹೊಳಿ ಆರೋಪ. ಬೆಳಗಾವಿ,ಜೂನ್,20,2023(..):ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಸರ್ವರ್ ಸಮಸ್ಯೆ ಉಂಟಾಗಿದ್ದು, ಅರ್ಜಿ ಸಲ್ಲಿಸಲು ಬಂದ ಜನರು ಕಾದು ಕಾದು ಸುಸ್ತಾಗುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದಾರೆ. ನಮ್ಮ ​​​​ಸರ್ಕಾರದ ಸರ್ವರ್​ ಅನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ. ನಮ್ಮ ಸಿಸ್ಟಮ್​ ಗಳನ್ನು ಇವಿಎಂ ರೀತಿಯಲ್ಲಿ ಹ್ಯಾಕ್ ಮಾಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಎಷ್ಟೇ ಹ್ಯಾಕ್​ ಮಾಡಿದರೂ ನಮ್ಮ ಯೋಜನೆಗಳನ್ನು ಜಾರಿ ಮಾಡುತ್ತೇವೆ. ಆನ್ ​ಲೈನ್ ​ನಲ್ಲಿ ಸಮಸ್ಯೆಯಾದರೆ ಆಫ್ ​ಲೈನ್ ​ನಲ್ಲಿ ಅರ್ಜಿ ಪಡೆಯುತ್ತೇವೆ. ಒಂದು ತಿಂಗಳು ತಡ ಆಗಬಹುದು ಅದಕ್ಕಿಂತಲೂ ಹೆಚ್ಚು ಆಗಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು. : - - - -- -