ಹಿಟ್ ಅಂಡ್ ರನ್ ಗೆ ಇಬ್ಬರು ಯುವಕರು ಬಲಿ. ಮಂಡ್ಯ,ಜೂನ್,19,2023(..):ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲ್ಲೂಕಿನ ಹಿರೀಕಳಲೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹಿರೀಕಳಲೆ ಗ್ರಾಮದ ಸಂದೇಶ್(25) ಹಾಗೂ ಮರಡಹಳ್ಳಿ ನಿವಾಸಿ ಭರತ್(23) ಎಂದು ಗುರುತಿಸಲಾಗಿದೆ. ಎಳನೀರು ವ್ಯಾಪಾರ ಮಾಡುತ್ತಿದ್ದ ಈ ಇಬ್ಬರು ಯುವಕರು ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಕೆ.ಆರ್.ಪೇಟೆಯಿಂದ ಕಿಕ್ಕೇರಿ ಕಡೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬೈಕ್ ಗೆ ಯಾವುದೋ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು, ವಾಹನದ ಪತ್ತೆಗಾಗಿ ಸಿಸಿಟಿವಿ ಕ್ಯಾಮರಾದ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಈ ಕುರಿತು ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - - .