ಮಕ್ಕಳ ಅನುಕೂಲಕ್ಕೆ ಪಠ್ಯ ಪರಿಷ್ಕರಣೆ ಮಾಡಿದರೆ ತಪ್ಪೇನು? ಗೀತಾ ಶಿವರಾಜ್ ​​ಕುಮಾರ್​​​​ ಸಮರ್ಥನೆ. ಮೈಸೂರು,ಜೂನ್,17,2023(..):ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಪಠ್ಯ ಪರಿಷ್ಕರಣೆ ಮೂಲಕ ಹಿಂದಿನ ಬಿಜೆಪಿ ಸರ್ಕಾರ ಅಳವಡಿಸಿದ್ಧ ಕೆಲ ವಿಷಯಗಳನ್ನ ತೆಗೆದು ಹಾಕಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಗೀತಾ ಶಿವರಾಜ್ ​​ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನ ಕುಕ್ಕರಹಳ್ಳಿಯಲ್ಲಿ ಮಾತನಾಡಿದ ಗೀತಾ ಶಿವರಾಜ್​​ಕುಮಾರ್, ಮಕ್ಕಳ ಅನುಕೂಲಕ್ಕೆ ಪಠ್ಯ ಪರಿಷ್ಕರಣೆ ಮಾಡಿದರೆ ತಪ್ಪೇನು? ಎಂದು ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡಿದ್ದಾರೆ. ಪಠ್ಯ ಪುಸ್ತಕಗಳಲ್ಲಿ ಒಳ್ಳೆಯ ವಿಚಾರಗಳು ಮಾತ್ರ ಇರಬೇಕು. ಹೀಗಾಗಿ ಶಾಲಾ ಪಠ್ಯ ಪುಸ್ತಕದಲ್ಲಿ ಬದಲಾವಣೆಯಾದರೆ ಒಳ್ಳೆಯದು ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದ್ದಾರೆ. : - – – - -