ಜೂ.20 ರಂದು ಕೇಂದ್ರದ ವಿರುದ್ದ ರಾಜ್ಯಾದ್ಯಂತ ಪ್ರತಿಭಟನೆ-ಡಿ.ಕೆ ಶಿವಕುಮಾರ್ ಘೊಷಣೆ. ಬೆಂಗಳೂರು,ಜೂನ್,16,2023(..):ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಜೂನ್ 20 ರಂದು ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ರಾಜ್ಯದ ಜಿಲ್ಲಾ ಕೇಂಧ್ರಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದರು. ಮೊದಲು ಎಫ್ ಸಿಐ ಅಕ್ಕಿ ಕೊಡುವುದಾಗಿ ಹೇಳಿತ್ತು. ನಂತರ ಅಕ್ಕಿ ಕೊಡಲು ಸಾಧ್ಯವಿಲ್ಲ ಎಂದು ಪತ್ರ ಬರೆಯಿತು. ಇದೊಂದು ದ್ವೇಷದ ರಾಜಕಾರಣ. ಬಿಜೆಪಿ ಬಡವರಿಗೆ ದ್ರೋಹ ಮಾಡುವ ಪಕ್ಷ. ಬಿಜೆಪಿ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆದಿದೆ ಎಂದು ಡಿ.ಕೆ ಶಿವಕುಮಾರ್ ಕಿಡಿಕಾರಿದರು. : - –- - 20-