ರದ್ದು ಕುರಿತು ಸಿಎಂ ಮತ್ತು ಡಿಸಿಎಂ ಜೊತೆ ಚರ್ಚಿಸಿ ನಿರ್ಧಾರ- ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್. ಬೆಂಗಳೂರು,ಜೂನ್,15,2023(..):ಎನ್ ಪಿಎಸ್ ರದ್ದು ಕುರಿತು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಜೊತೆ ಚರ್ಚಿಸಿ ನಿರ್ಧಾರ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ತಿಳಿಸಿದರು. ಇಂದು ಈ ಕುರಿತು ಮಾತನಾಡಿದ ಸಚಿವ ಎಂ.ಸಿ ಸುಧಾಕರ್, ಎನ್ ಪಿಎಸ್ ರದ್ದು ಕುರಿತು ತಜ್ಞರ ಅಭಿಪ್ರಾಯ ಪಡೆದುಕೊಳ್ಳಲಾಗುತ್ತದೆ. ಈಗಾಗಲೇ ಸಭೆಗಳನ್ನ ಕೂಡ ಮಾಡಲಾಗಿದೆ. ಈ ಕುರಿತು ಮತ್ತಷ್ಟು ಮಾಹಿತಿ ಸಂಗ್ರಹ ಮಾಡುತ್ತೇವೆ ಎಂದರು. ಕಳೆದ 2 ವರ್ಷದ ಹಿಂದೆ ಎನ್ ಪಿಎಸ್ ಜಾರಿಯಾಗಿದೆ. ಎನ್ ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿ ಸಂಬಂಧ ಸಿಎಂ ಮತ್ತು ಡಿಸಿಎಂ ಜೊತೆ ಚರ್ಚಿಸಿ ನಿರ್ಧಾರ ಮಾಡಲಾಗುತ್ತದೆ ಎಂದು ಸಚಿವ ಎಂ.ಸಿ ಸುಧಾಕರ್ ತಿಳಿಸಿದರು. : –- – – - .