ಜೆಸಿಬಿ ಹರಿದು ಮೂವರು ಸ್ಥಳದಲ್ಲೇ ಸಾವು. ರಾಯಚೂರು,ಜೂನ್,14,2023(..):ಜಮೀನಿನಲ್ಲಿ ಮಲಗಿದ್ದ ವೇಳೆ ಜೆಸಿಬಿ ಹರಿದು ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತಪಟ್ಟವರು. ಸಾವನ್ನಪ್ಪಿದ ಮೂವರು ಛತ್ತೀಸ್ ​ಗಢ ಮೂಲದದವರು ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - –