ಮಧ್ಯ ಪ್ರದೇಶದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಬೆಂಗಳೂರು,ಜೂನ್,14,2023(..):ಮಧ್ಯ ಪ್ರದೇಶದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಧ್ಯ ಪ್ರದೇಶದಲ್ಲೂ ನಾವು 5 ಗ್ಯಾರಂಟಿಗಳ ಭರವಸೆ ನೀಡಿದ್ದೇವೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಎಲ್ಲಾ ರಾಜ್ಯಗಳಲ್ಲೂ ಒಂದೇ ರೀತಿಯ ಪ್ರಣಾಳಿಕೆ ಇರಲ್ಲ. ಆಯಾ ರಾಜ್ಯಗಳ ಅಗತ್ಯಕ್ಕೆ ತಕ್ಕಂತೆ ಪ್ರಣಾಳಿಕೆ ಮಾಡುತ್ತೇವೆ. ಒಂದು ರಾಜ್ಯದ ಪ್ರಣಾಳಿಕೆ ಇನ್ನೊಂದು ರಾಜ್ಯದ ಪ್ರಣಾಳಿಕೆಗೆ ಅನ್ವಯ ಆಗಲ್ಲ ಎಂದು ತಿಳಿಸಿದರು. : – –- - – -