ಇನ್ಮುಂದೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಒರಿಜಿನಲ್ ಐಡಿ ಬೇಕಿಲ್ಲ. ಬೆಂಗಳೂರು,ಜೂನ್,12,2023(..):ನಿನ್ನೆ ರಾಜ್ಯಾದ್ಯಂತ ಶಕ್ತಿಯೋಜನೆಗೆ ಚಾಲನೆ ಸಿಕ್ಕಿದ್ದು ಈ ಮೂಲಕ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸಲಾಗಿದೆ. ಮಹಿಳೆಯರು ಉಚಿತ ಪ್ರಯಾಣ ಬೆಳೆಸಲು ಒರಿಜಿನಲ್ ಐಡಿ ಕಾರ್ಡ್ ಹೊಂದಿರಬೇಕು ಎಂಬ ನಿಯಮವಿತ್ತು. ಆದರೆ ರಾಜ್ಯದ ಹಲವೆಡೆ ಐಡಿ ಪ್ರೂಫ್​ ವಿಚಾರಕ್ಕೆ ಕಂಡಕ್ಟರ್ ಹಾಗೂ ಮಹಿಳಾ ಪ್ರಯಾಣಿಕರ ನಡುವೆ ಗಲಾಟೆ, ಮಾತಿನ ಚಕಮಕಿಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ ನಕಲು ಪ್ರತಿ ತೋರಿಸಿ ಬಸ್‌ ಗಳಲ್ಲಿ ಉಚಿತ ಪ್ರಯಾಣಿಸಬಹುದು ಎಂದು ಹೇಳಿದೆ. ಈ ಮೂಲಕ ಒರಿಜಿನಲ್​ ಐಡಿ ಬೇಕಾ? ಅಥವಾ ನಕಲು (ಝರಾಕ್ಸ್) ಪ್ರತಿ ಇದ್ದರೆ ಸಾಕಾ? ಎನ್ನುವ ಎಲ್ಲಾ ಗೊಂದಲಗಳಿಗೆ ಇದೀಗ ತೆರೆ ಎಳೆದಿದೆ. ಈ ಕುರಿತು ಸಾರಿಗೆ ಇಲಾಖೆ ತಿದ್ದುಪಡಿ ಆದೇಶ ಹೊರಡಿಸಿದ್ದು, ಆಧಾರ್ ಕಾರ್ಡ್ ಹಾಗೂ ವೋಟರ್​ ಐಡಿಯ ಝರಾಕ್ಸ್​ ಇದ್ದರೂ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಹಾರ್ಡ್ ಮತ್ತು ಸಾಫ್ಟ್ ಕಾಪಿ ಇದ್ದರೂ ಉಚಿತವಾಗಿ ಪ್ರಯಾಣಿಸಬಹುದಾಗಿದೆ. : - - - – - .