ಕೆಆರ್‌ ಎಸ್ ಹಿನ್ನೀರಿನಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಸಾವು. ಮೈಸೂರು,ಜೂನ್,13,2023(..):ಕೆಆರ್‌ಎಸ್ ಹಿನ್ನೀರಿನಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ತಾಲ್ಲೂಕು ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಹಾಸನ ಮೂಲದ ಚಿರಂತ್(22) ಬೀದ‌ರ್ ಮೂಲದ ಸುನಿಲ್ (22) ಮೃತ ವಿದ್ಯಾರ್ಥಿಗಳು. ಇಬ್ಬರು ವಿದ್ಯಾರ್ಥಿಗಳು ನಗರದ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಈ ನಡುವೆ ಇಬ್ಬರು ವಿದ್ಯಾರ್ಥಿಗಳು ಸ್ನೇಹಿತರ ಜೊತೆ ಬೈಕ್‌ ‌ನಲ್ಲಿ ಬಂದಿದ್ದರು. ಇಬ್ಬರೂ ಈಜಲು ನೀರಿಗೆ ಇಳಿದಿದ್ದರು. ಅರ್ಧಗಂಟೆ ಈಜಾಡಿದ ನಂತರ ನೀರಿನ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ಇಬ್ಬರೂ ಸಾವನ್ನಪ್ಪಿದ್ದಾರೆ. ಈ ಕುರಿತು ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - – – -.