ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು. ಚಿತ್ರದುರ್ಗ,ಜೂನ್,12,2023(..):ಲಾರಿಯನ್ನ ಓವರ್ ಟೇಕ್ ಮಾಡುವ ಭರದಲ್ಲಿ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ವಿಜಾಪುರದ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಕುಟುಂಬವೊಂದು ಗೋವಾ ಪ್ರವಾಸಕ್ಕೆ ತೆರಳಿ ವಾಪಸ್ ಆಗುತ್ತಿದ್ದ ವೇಳೆ ಈ ಅಪ‍ಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಯುವಕ ಓರ್ವ ಯುವತಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿಯನ್ನ ಹಿಂದಿಕ್ಕುವ ಭರದಲ್ಲಿ ಕಾರು ಲಾರಿಗೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಈ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - – - - .