ಮೀಟೂ ಪ್ರಕರಣ: ನಟಿ ಶೃತಿ ಹರಿಹರನ್ ಗೆ ಕೋರ್ಟ್ ನಿಂದ ನೋಟಿಸ್. ಬೆಂಗಳೂರು,ಜೂನ್,9,2023(..):ನಟ ಅರ್ಜುನ್ ಸರ್ಜಾ ವಿರುದ್ಧದ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರ ಸಲ್ಲಿಸುವಂತೆ ನಟಿ ಶೃತಿ ಹರಿಹರನ್ ಗೆ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ ನೋಟಿಸ್ ನೀಡಿದೆ. 2018ರಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಮೀಟೂ ಆರೋಪ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿ ಪೊಲೀಸರು ತನಿಖೆ ಮಾಡಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಬಿರಿಪೋರ್ಟ್ ಪ್ರಶ್ನಿಸಿ ನಟಿ ಶೃತಿಹರಿಹರನ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ ಇದೀಗ ಪೊಲೀಸರಿಗೆ ಸೂಕ್ತ ಸಾಕ್ಷ್ಯಾಧಾರ ಸಲ್ಲಿಸುವಂತೆ ನಟಿ ಶೃತಿ ಹರಿಹರನ್ ಗೆ ನೋಟಿಸ್ ಜಾರಿ ಮಾಡಿದೆ ಎನ್ನಲಾಗಿದೆ. : - - - – - .