-- ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ: ಇಲಾಖಾ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶ. ಬೆಂಗಳೂರು,ಜೂನ್,6,2023(..):--(ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರ) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿ ಬಂದಿದ್ದು ಈ ಹಿನ್ನೆಲೆಯಲ್ಲಿ ಇಲಾಖಾ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಿಎಂ ಸಿದ್ಧರಾಮಯ್ಯ ಆದೇಶ ಹೊರಡಿಸಿದ್ದಾರೆ. ದಿನಾಂಕ:23-07-2022 ಮತ್ತು 24-07-2022ರಂದು ನಡೆದ -- (ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರ) ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರ ಅಕ್ರಮಗಳು ನಡೆದಿರುವುದಾಗಿ ವ್ಯಾಪಕವಾದ ದೂರುಗಳು ಸಲ್ಲಿಕೆಯಾಗಿದೆ. ಈ ಬಗ್ಗೆ ಕೂಡಲೇ ನಿರ್ದಾಕ್ಷಿಣ್ಯವಾದ ಇಲಾಖಾ ತನಿಖೆ ನಡೆಸಿ ತಪ್ಪಿತಸ್ಥರ ವಿವರಗಳೊಂದಿಗೆ 10 ದಿನಗಳೊಳಗಾಗಿ ವರದಿ ಸಲ್ಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ. : – – -- - – – -