ಬಿಜೆಪಿಯವರಿಗೆ ಜಾಲತಾಣದಲ್ಲಿ ವೈರಲ್​ ಮಾಡುವುದನ್ನ ಬಿಟ್ಟರೆ ಬೇರೆ ಕೆಲಸ ಇಲ್ಲ- ಸಚಿವ ಚಲುವರಾಯಸ್ವಾಮಿ. ಬೆಂಗಳೂರು,ಜೂನ್,7,2023(..):ಗ್ಯಾರಂಟಿಗಳ ಬಗ್ಗೆ ತಾವು ಮಾತನಾಡಿದ್ಧ ವಿಡಿಯೋ ವೈರಲ್ ಆದ ಬೆನ್ನಲ್ಲೆ ಈ ಕುರಿತು ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಚಲುವರಾಯಸ್ವಾಮಿ, ಗ್ಯಾರಂಟಿ ಯೋಜನೆಗಳ ಬಗ್ಗೆ ನಾನು ಗಿಮಿಕ್​ ಅಂತಾ ಹೇಳಿಲ್ಲ. ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ನಾವು ಈಡೇರಿಸುತ್ತಿದ್ದೇವೆ. ಬಿಜೆಪಿಯವರಿಗೆ ಜಾಲತಾಣದಲ್ಲಿ ವೈರಲ್​ ಮಾಡುವುದೇ ಕೆಲಸ ಆಗಿದೆ. ಬಿಜೆಪಿಗೆ ವೈರಲ್ ಮಾಡೋದು ಬಿಟ್ಟು ಬೇರೆ ಕೆಲಸ ಮಾಡಲು ಹೇಳಿ ಎಂದು ಟಾಂಗ್ ನೀಡಿದರು. ಸಚಿವ ಚಲುವರಾಯಸ್ವಾಮಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದ್ದು ಆ ವಿಡಿಯೋದಲ್ಲಿ , ಉಚಿತ ಭರವಸೆಗಳೆಲ್ಲ ಕೇವಲ ಚುನಾವಣಾ ಗಿಮಿಕ್ ಅಷ್ಟೆ. ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲು ಇಂಥ ಗಿಮಿಕ್​ ಗಳನ್ನು ಮಾಡಲಾಗಿದೆ ಎಂದು ಹೇಳಿಕೆ ನೀಡಿದ್ದರು ಎನ್ನಲಾಗಿದೆ. : – – – – -.