ಒಡಿಶಾದ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ. ಒಡಿಶಾ,ಜೂನ್,3,2023(..):ಒಡಿಶಾದ ಬಾಲಸೋರ್‌ ನ ಬಹನಾಗ ರೈಲ್ವೆ ನಿಲ್ದಾಣದ್ಲಿ ಸಂಭವಿಸಿದ ರೈಲು ಅಪಘಾತದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಲಸೋರ್ ನ ಬಹನಾಗದಲ್ಲಿನ ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ರೈಲ್ಚೆ ಅಧಿಕಾರಿಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದರು. ಬಳಿಕ ಕಟಕ್ ಆಸ್ಪತ್ರೆಗೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ತೆರಳುತ್ತಿದ್ದು, ಗಾಯಾಳುಗಳ ಯೋಗಕ್ಷೇಮ ವಿಚಾರಿಸಲಿದ್ದಾರೆ. : - - – –