ಬಿಜೆಪಿ ಅವಧಿಯಲ್ಲಿ ಭ್ರಷ್ಟಾಚಾರ ಆಗಿದ್ದರೇ ಸಿಎಂ ತನಿಖೆ ಮಾಡಿಸಲಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿ,ಆಗಸ್ಟ್,23,2024 (..):ಬಿಜೆಪಿ ಅವಧಿಯಲ್ಲಿನ ಹಗರಣಗಳನ್ನ ಬಯಲಿಗೆಳೆದು ತನಿಖೆ ಮಾಡಿಸುತ್ತೇವೆ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಅವಧಿಯಲ್ಲಿ ಭ್ರಷ್ಟಾಚಾರ ಆಗಿದ್ದರೆ ಸಿಎಂ ಸಿದ್ದರಾಮಯ್ಯ ತನಿಖೆ ಮಾಡಿಸಲಿ. ಸದ್ಯ ರಾಜ್ಯದಲ್ಲಿ ನಿಮ್ಮದೇ ಸರ್ಕಾರ ಇದೆ. ಯಾಕೆ ಕ್ರಮ ಕೈಗೊಂಡಿಲ್ಲ ಬಿಜೆಪಿ ಯಾವುದಾದ್ರೂ ಭ್ರಷ್ಟಾಚಾರ ಮಾಡಿದ್ರೆ ತನಿಖೆ ಮಾಡಲಿ ಎಂದರು. ಸಿಎಂ ಸಿದ್ದರಾಮಯ್ಯ ಜಾತಿ ನೆರಳಿನಲ್ಲಿದ್ದಾರೆ. ದೇವರಾಜ ಅರಸು ಅವರಿಗೆ ಅಪಮಾನ ಮಾಡಿದ್ದು ಕಾಂಗ್ರೆಸ್ ನವರು. ಡಾ.ಬು.ಆರ್ ಅಂಬೇಡ್ಕರ್ ಅವರ ಸಮಾಧಿಗೆ ಕಾಂಗ್ರೆಸ್ ನವರು ಜಾಗ ನೀಡಲಿಲ್ಲ ಎಂದು ಪ್ರಹ್ಲಾದ್ ಜೋಶಿ ಕಿಡಿಕಾರಿದರು. : , , , , ,