ಲೈಂಗಿಕ ದೌರ್ಜನ್ಯ ಕೇಸ್: ಪ್ರಜ್ವಲ್ ರೇವಣ್ಣ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ ಬೆಂಗಳೂರು,ಆಗಸ್ಟ್,23,2024 (..):ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೊದಲ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸಿಪುರ ಟೌನ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್‌ಐಟಿಗೆ ವಹಿಸಿತ್ತು. ಸದ್ಯ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದು, ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಎಸ್ ಐಟಿ ಇದೀಗ ಕೋರ್ಟ್ ಗೆ 2000 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 123 ಸಾಕ್ಷ್ಯಗಳನ್ನು ಸಂಗ್ರಹಿಸಿ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಎಸ್‌ಐಟಿ ತನಿಖಾಧಿಕಾರಿ ಸುಮಾರಾಣಿ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. : , , , ,