ಒಡಿಶಾ ರೈಲು ದುರಂತ: ಕನ್ನಡಿಗರನ್ನ ಸುರಕ್ಷಿತವಾಗಿ ಕರೆತರಲು ಸಚಿವ ಸಂತೋಷ್ ಲಾಡ್ ನಿಯೋಜನೆ ಬೆಂಗಳೂರು,ಜೂನ್,3,2023(..):ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ. ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಬಳಿಕ ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವನ್ನು ಒದಗಿಸಲು ಸೂಚನೆ ನೀಡಿದ್ದಾರೆ. ಸಂತೋಷ್ ಲಾಡ್ ಅವರ ಜತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸೇರಿ ಇತರೆ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಹೊರಟಿದೆ. ಈ ಕುರಿತು ಮಾತನಾಡಿದ ಸಚಿವ ಸಂತೋಷ್ ಲಾಡ್, ಕನ್ನಡಿಗರನ್ನ ಕರೆತರಲು ಸಿಎಂ ಸೂಚನೆ ನೀಡಿದ್ದಾರೆ. ವಿಶೇಷ ವಿಮಾನದ ಮೂಲಕ ಒಡಿಶಾದ ಭುವನೇಶ್ವರಕ್ಕೆ ತೆರಳುತ್ತಿದ್ದೇನೆ. ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳ ಜೊತೆ ತೆರಳುತ್ತಿದ್ದೇನೆ. ಸುರಕ್ಷಿತವಾಗಿ ಕನ್ನಡಿಗರನ್ನ ಕರೆತರುವುದು ನಮ್ಮ ಜವಾಬ್ದಾರಿ. ಕನ್ನಡಿಗರಿಗೆ ಯಾವುದೇ ತೊಂದರೆಯಾಗದ ರೀತಿ ಚಿಕಿತ್ಸೆ ಒದಗಿಸಿವುದು ನಮ್ಮ ಕರ್ತವ್ಯ. ಪ್ರಾಥಮಿಕ ಮಾಹಿತಿ ಪ್ರಕಾರ ಕನ್ನಡಿಗರಿಗೆ ಯಾವುದೇ ಸಮಸ್ಯೆ ಆಗಿಲ್ಲ ಎಂದಿದ್ದಾರೆ. ರಾಜ್ಯ ತುರ್ತು ನಿರ್ವಹಣಾ ಕೇಂದ್ರ ()ದಲ್ಲಿ ನಾಗರೀಕರ ಅನುಕೂಲಕ್ಕಾಗಿ ಸಹಾಯವಾಣಿ ಸಂಖ್ಯೆ 1070, 080-22253707, 080-22340676 ತೆರೆಯಲಾಗಿದೆ. : - – - – – -