ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ಡಿಸಿಎಂ ಡಿ.ಕೆ ಶಿವಕುಮಾರ್ ಗೆ ರಿಲೀಫ್ ನೀಡಿದ ಹೈಕೋರ್ಟ್. ಬೆಂಗಳೂರು,ಜೂನ್,2.2023(..):ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನ ಹೈಕೋರ್ಟ್ ಏಕಸದಸ್ಯ ಪೀಠ ಮತ್ತೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್​ ವಿರುದ್ಧದ ಸಿಬಿಐ ತನಿಖೆಗೆ ಎರಡನೇ ಬಾರಿಗೆ ಹೈಕೋರ್ಟ್ ಮೇ ಅಂತ್ಯದವರೆಗೂ ತಡೆಯಾಜ್ಞೆ ನೀಡಿತ್ತು. ಇದೀಗ ಮತ್ತೆ ತಡೆಯಾಜ್ಞೆ ವಿಸ್ತರಿಸಿದ್ದು, ಡಿಕೆ ಶಿವಕುಮಾರ್​ ರಿಗೆ ರಿಲೀಫ್ ಸಿಕ್ಕಂತಾಗಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(2), 13(1)ಇ ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಈ ಪ್ರಕರಣ ರದ್ದು ಕೋರಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಇದೀಗ ತಡೆಯಾಜ್ಞೆ ಮತ್ತೆ ಮುಂದುವರೆದಿದೆ. : – – - .