ಮಾಜಿ ಸಿಎಂ ಬಿಎಸ್ ವೈ ಭೇಟಿ ಮಾಡಿದ ಡಿಸಿಎಂ ಡಿ.ಕೆ ಶಿವಕುಮಾರ್. ಬೆಂಗಳೂರು,ಜೂನ್,1,2023(..):ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಡಿಸಿಎಂ ಡಿ.ಕೆ ಶಿವಕುಮಾರ್ ಇಂದು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು. ಬಿಎಸ್ ಯಡಿಯೂರಪ್ಪರನ್ನು ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಡಿ.ಕೆ ಶಿವಕುಮಾರ್ ಬೇಟಿಯಾದರು. ಡಿಕೆಶಿ ಅವರನ್ನ ಬಿಎಸ್ ವೈ ತಮ್ಮ ಮನೆಯ ಮೇನ್ ಗೇಟ್ ವರೆಗೆ ಬಂದು ಹೂಗುಚ್ಛ ನೀಡಿ ಸ್ವಾಗತಿಸಿದರು. ಬಳಿಕ ಸುಮಾರು ಉಭಯ ನಾಯಕರ ನಡುವೆ ಸುಮಾರು 25 ನಿಮಿಷಗಳ ಕಾಲ ಮಾತುಕತೆ ನಡೆಯಿತು ಎನ್ನಲಾಗಿದೆ. : - - -