ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು,ಜೂನ್,1,2023(..):ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಐದು ಗ್ಯಾರಂಟಿಗಳನ್ನ ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸುತ್ತಿದ್ದು ಈ ಹಿನ್ನೆಲೆಯಲ್ಲಿ ಸಿಎಂ ಸಿದ್ಧರಾಮಯ್ಯರಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರದಿಂದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಿನ್ನೆಲೆ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಯೋಜನೆಗಳನ್ನು ಮೊಟಕುಗೊಳಿಸಬಾರದು. ಹಾಗೆಯೇ ಯೋಜನೆಗಳಿಗೆ ಅನುದಾನ ಕಡಿತಗೊಳಿಸಬಾರದು ಎಂದು ಸಿಎಂ ಸಿದ್ಧರಾಮಯ್ಯಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಪತ್ರದ ಮೂಲಕ ಮನವಿ ಮಾಡಿದ್ದಾರೆ. : - - – –-