ಸಚಿವ ಸಂಪುಟ ಸಭೆ ಬಳಿಕ ಗ್ಯಾರಂಟಿ ಯೋಜನೆ ಬಗ್ಗೆ ಘೋಷಣೆ-ಸಚಿವ ರಾಮಲಿಂಗರೆಡ್ಡಿ. ಬೆಂಗಳೂರು,ಜೂನ್,2,2023(..):ಕಾಂಗ್ರೆಸ್​ ಸರ್ಕಾರ 5 ಗ್ಯಾರೆಂಟಿಗಳನ್ನು ಜಾರಿಗೊಳಿಸಲು ಕಸರತ್ತು ನಡೆಸುತ್ತಿದ್ದು ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ. ಈ ಸಂಬಂಧ ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಇಂದಿನ ಸಭೆಯಲ್ಲೇ ಐದು ಗ್ಯಾರಂಟಿಗಳ ಕುರಿತು ಅಂತಿಮ ನಿರ್ಧಾರವಾಗಲಿದೆ . ಖುದ್ದು ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್ ಬಳಿಕ ಗ್ಯಾರಂಟಿ ಘೋಷಣೆಗೆ ಸಜ್ಜಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಎಲ್ಲಾ ಇಲಾಖೆ ಜತೆ ಸಭೆ ನಡೆಸಿದ್ದು, ಅಂತಿಮ ನಿರ್ಧಾರಕ್ಕೆ ಬಂದಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಕುರಿತು ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಬೆಳಿಗ್ಗೆ 11ಕ್ಕೆ ಸಚಿವ ಸಂಪುಟ ಸಭೆ ಇದೆ. ಸಚಿವ ಸಂಪುಟ ಸಭೆ ಬಳಿಕ ಘೋಷಣೆಯಾಗುತ್ತೆ. ಸ್ವತಃ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಲಿದ್ದಾರೆ ಮಧ್ಯಾಹ್ನದ ವೇಳೆಗೆ ಘೋಷಣೆ ಮಾಡಲಿದ್ದಾರೆ ಎಂದರು. : – - – – -.