ರಾಜಸ್ಥಾನದಲ್ಲಿ ಬಿಜೆಪಿ ಪ್ಯಾನ್ ಇಂಡಿಯಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ಬೆಂಗಳೂರು, ಮೇ 31, 2023 (..):ರಾಜಸ್ಥಾನದ ಅಜ್ಮೀರ್‌ನಲ್ಲಿ ಪ್ಯಾನ್ ಇಂಡಿಯಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆ ಭರ್ಜರಿ ಸಿದ್ಧತೆ ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಬುಧವಾರ ಎಲ್ಲಾ 543 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಂತೆ ಒಂದು ತಿಂಗಳ ಪ್ರಚಾರ ಅಭಿಯಾನಕ್ಕೆ ರಾಜಸ್ಥಾನದ ಅಜ್ಮೀರ್‌ನಲ್ಲಿ ಚಾಲನೆ ನೀಡಲಿದ್ದಾರೆ. ಈ ಅಭಿಯಾನದ ಚಾಲನೆಗೆ ರಾಜಸ್ಥಾನವನ್ನು ಬಿಜೆಪಿ ಆಯ್ಕೆ ಮಾಡಿಕೊಂಡಿರುವುದು ಕೂಡ ಚುನಾವಣಾ ಉದ್ದೇಶಕ್ಕೆ. ರಾಜಸ್ಥಾನದ ವಿಧಾನಸಭಾ ಚುನಾವಣಾ ಪ್ರಚಾರಕ್ಕೂ ಇದೆ ಮುನ್ನುಡಿಯಾಗಲಿದೆ. ಪ್ರಚಾರದ ಭಾಗವಾಗಿ, ಪಕ್ಷದ ನಾಯಕರು ಪ್ರತಿ ಲೋಕಸಭಾ ಕ್ಷೇತ್ರಕ್ಕೆ 1,000 ಗಣ್ಯ ಕುಟುಂಬಗಳನ್ನು ಭೇಟಿ ಮಾಡುತ್ತಾರೆ ಮತ್ತು ಭಾರತದಾದ್ಯಂತ 51 ಮೆಗಾ ನಡೆಸುತ್ತಾರೆ.