ಬೆಂಗಳೂರು ಪೊಲೀಸ್ ಆಯುಕ್ತರಾಗಿ ಬಿ.ದಯಾನಂದ ನೇಮಕ. ಬೆಂಗಳೂರು,ಮೇ,30,2023(..):ಬೆಂಗಳೂರು ಪೊಲೀಸ್ ಆಯುಕ್ತರನ್ನಾಗಿ ಬಿ.ದಯಾನಂದ ಅವರನ್ನ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಪೊಲೀಸ ಕಮಿಷನರ್ ಆಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇನ್ನು ಶರತ್ ಚಂದ್ರ ಅವರನ್ನು ಗುಪ್ತಚರ ಇಲಾಖೆ ಎಡಿಜಿಪಿಯಾಗಿ ಸಲೀಂ ಅವರನ್ನ ಸಿಐಡಿ ವಿಭಾಗಕ್ಕೆ ಡಿಜಿಪಿಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. : . - –- -.