ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ. ಬೆಂಗಳೂರು,ಮೇ,30,2023(..):ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ತುಟ್ಟಿಭತ್ಯೆ ಯನ್ನು ಶೇ 4ಷ್ಟು ಹೆಚ್ಚಿಸಿ ಮಂಗಳವಾರ ಆದೇಶ ಹೊರಡಿಸಿದೆ. ಪರಿಷ್ಕೃತ ತುಟ್ಟಿ ಭತ್ಯೆ 2023ರ ಜನವರಿ 1ರಿಂದಲೇ ಪೂರ್ವಾನ್ವಯವಾಗಲಿದೆ. ಶೇ. 31ರಿಂದ ಶೇ. 35ಕ್ಕೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಇನ್ನು ತುಟ್ಟಿಭತ್ಯೆ ಹೆಚ್ಚಳದ ಆದೇಶವನ್ನ ಸಿಎಂ ಸಿದ್ದರಾಮಯ್ಯ ಟ್ವಿಟ್ ಮೂಲಕ ಹಂಚಿಕೊಂಡಿದ್ದಾರೆ. : - - – -