ಮೈಸೂರಿನ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆ. ಮೈಸೂರು,ಮೇ,29,2023(..):ಮೈಸೂರು ಜಿಲ್ಲೆಯ ಟಿ.ನರಸೀಪುರ-ಕೊಳ್ಳೆಗಾಲ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸಂಭವಿಸಿದ್ದ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎನ್ನಲಾಗಿದೆ. ಖಾಸಗಿ ಬಸ್ ಮತ್ತು ಇನ್ನೋವಾ ಕಾರು ಡಿಕ್ಕಿಯಾಗಿ ಈ ಭೀಕರ ಅಪಘಾತ ಸಂಭವಿಸಿದ್ದು ಡಿಕ್ಕಿ ರಭಸಕ್ಕೆ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಮೃತಪಟ್ಟವರು ಬಳ್ಳಾರಿ ಮೂಲದವರು. ಪ್ರವಾಸಕ್ಕೆಂದು ಮೈಸೂರಿಗೆ ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದೆ. ಗಾಯಗೊಂಡವರನ್ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ. : - – 10 - -