ಗ್ಯಾರಂಟಿಗಳ ಜಾರಿ ವಿಚಾರದಲ್ಲಿ ಜನರಿಗೆ ಕಾಂಗ್ರೆಸ್ ನಿಂದ ದೋಖಾ- ಮಾಜಿ ಸಿಎಂ ಬೊಮ್ಮಾಯಿ ಟೀಕೆ. ಬೆಂಗಳೂರು,ಮೇ,29,2023(..):ಐದು ಗ್ಯಾರಂಟಿಗಳ ಜಾರಿ ವಿಚಾರದಲ್ಲಿ ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ. ತಾತ್ವಿಕ ಒಪ್ಪಿಗೆಯಲ್ಲಿ ಫ್ರಿಂ ಅಂದಿದ್ದರು. ಈಗ ಬೇರೆ ಬೇರೆ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ನವರು ಹೇಳುವುದೊಂದು ಮಾಡುವುದೊಂದು ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಉತ್ತಮ ಜನಪರ ಆಡಳಿತ ನೀಡುತ್ತಿದೆ. ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಂಡಿದೆ. ದೇಶದಲ್ಲಿ ಶಾಂತಿ ನೆಲೆಸುವ ಕೆಲಸವನ್ನು ಮೋದಿ ಸರ್ಕಾರ ಮಾಡಿದೆ. ಜಿಎಸ್​ಟಿ ಮೂಲಕ ಆದಾಯ ಸಂಗ್ರಹ ಮಾಡಲಾಗುತ್ತಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿದೆ. ಕರ್ನಾಟಕ ರಾಜ್ಯಕ್ಕೆ ಮೋದಿ ಸರ್ಕಾರ ಸಾಕಷ್ಟು ಯೋಜನೆ ನೀಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೊಗಳಿದರು. : - - - –