ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಯಾವ ಜವಾಬ್ದಾರಿ, ಇಲ್ಲಿದೆ ಪಟ್ಟಿ… ಬೆಂಗಳೂರು,ಮೇ,27,2023(..):ಚುನಾವಣಾ ಫಲಿತಾಂಶ ಪ್ರಕಟವಾಗಿ ಹದಿನೈದು ದಿನಗಳ ಒಳಗಾಗಿ ಸಂಪೂರ್ಣ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ಇಂದು ನೂತನ ಸಚಿವರಾಗಿ 24 ಮಂದಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​, ಸ್ಪೀಕರ್​ ಯು ಟಿ ಖಾದರ್​ ಅವರ ಸಮ್ಮುಖದಲ್ಲಿ 24 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಎಲ್ಲಾ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು ಯಾರು ಯಾರಿಗೆ ಯಾವ ಯಾವ ಜವಾಬ್ದಾರಿ ನೀಡಲಾಗಿದೆ ಇಲ್ಲದೆ ನೋಡಿ ಮಾಹಿತಿ…ಸಿಎಂ ಸಿದ್ದರಾಮಯ್ಯ -ಹಣಕಾಸು, ಮತ್ತು ಗುಪ್ತಚರ ಇಲಾಖೆ ಡಿಸಿಎಂ ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ ಡಾ.ಜಿ.ಪರಮೇಶ್ವರ್ -ಗೃಹ ಸಚಿವ ಹೆಚ್.​ಕೆ.ಪಾಟೀಲ್ -ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಕೆಚ್​.ಮುನಿಯಪ್ಪ -ಆಹಾರ ಮತ್ತು ನಾಗರಿಕ ಖಾತೆ ಕೆ.ಜೆ.ಜಾರ್ಜ್​ -ಇಂಧನ ಖಾತೆ ಎಂ.ಬಿ.ಪಾಟೀಲ್ -ಐಟಿ, ಬಿಟಿ ಇಲಾಖೆ ರಾಮಲಿಂಗಾ ರೆಡ್ಡಿ –ಸಾರಿಗೆ ಇಲಾಖೆ ಸತೀಶ್ ಜಾರಕಿಹೊಳಿ –ಲೋಕಪಯೋಗಿ ಇಲಾಖೆ ಪ್ರಿಯಾಂಕ್ ಖರ್ಗೆ-ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಮೀರ್ ಅಹ್ಮದ್ ಖಾನ್-ವಸತಿ, ವಕ್ಫ್​​ ಅಂಡ್ ಅಲ್ಪಸಂಖ್ಯಾತ ಇಲಾಖೆ ಕೃಷ್ಣ ಬೈರೇಗೌಡ –ಕಂದಾಯ ಇಲಾಖೆ ದಿನೇಶ್ ಗಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಲುವರಾಯಸ್ವಾಮಿ –ಕೃಷಿ ಇಲಾಖೆ ಕೆ.ವೆಂಕಟೇಶ್ -ಪಶುಸಂಗೋಪನೆ ಹೆಚ್​.ಸಿ.ಮಹಾದೇವಪ್ಪ -ಸಮಾಜ ಕಲ್ಯಾಣ ಇಲಾಖೆ ಈಶ್ವರ್ ಖಂಡ್ರೆ-ಅರಣ್ಯ ಮತ್ತು ಪರಿಸರ ಖಾತೆ ಕೆ.ಎನ್.ರಾಜಣ್ಣ-ಸಹಕಾರ ಖಾತೆ ಶರಣಪ್ಪ ಬಸಪ್ಪ ದರ್ಶಾನಾಪುರ್ -ಸಣ್ಣ ಕೈಗಾರಿಕೆ ಖಾತೆ ಶಿವನಾಂದ್ ಪಾಟೀಲ್ -ಜವಳಿ ಮತ್ತು ಸಕ್ಕರೆ ಖಾತೆ ಆರ್​ಬಿ ತಿಮ್ಮಾಪುರ್ -ಅಬಕಾರಿ ಮತ್ತು ಮುಜರಾಯಿ ಇಲಾಖೆ ಎಸ್​.ಎಸ್.ಮಲ್ಲಿಕಾರ್ಜುನ್ -ಗಣಿ ಮತ್ತು ಭೂವಿಜ್ಞಾನ ಶಿವರಾಜ್ ತಂಗಡಗಿ -ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಶರಣ್ ಪ್ರಕಾಶ್ ಪಾಟೀಲ್ -ಉನ್ನತ ಶಿಕ್ಷಣ ಇಲಾಖೆ ಮಂಕಾಳ್ ವೈದ್ಯ-ಮೀನುಗಾರಿಕೆ ಮತ್ತು ಬಂದರು ಇಲಾಖೆ ಲಕ್ಷ್ಮೀ ಹೆಬ್ಬಾಳ್ಕರ್ -ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರಹೀಂ ಖಾನ್ –ಪೌರಾಡಳಿತ ಖಾತೆ ಡಿ.ಸುಧಾಕರ್ –ಮೂಲಸೌಕರ್ಯ ಖಾತೆ ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ ಖಾತೆ ಎನ್​.ಎಸ್​.ಬೊಸೆರಾಜು -ಪ್ರವಾಸೋದ್ಯಮ ಮತ್ತು ವಿಜ್ಞಾನ ಮತ್ತು ಟೆಕ್ನಾಲಜಿ ಖಾತೆ ಭೈರತಿ ಸುರೇಶ್- ನಗರಾಭಿವೃದ್ಧಿ ಇಲಾಖೆ ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಎಂ.ಸಿ.ಸುಧಾಕರ್-ವೈದ್ಯಕೀಯ ಖಾತೆ ಬಿ.ನಾಗೇಂದ್ರ -ಯುವಜನ ಸೇವೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ. : – --