ಪೂರ್ಣ ಪ್ರಮಾಣದ ಸಂಪುಟ ರಚನೆ: ನಾಳೆ ಖಾತೆ ಹಂಚಿಕೆ ಮಾಡುತ್ತೇವೆ- ಸಿಎಂ ಸಿದ್ಧರಾಮಯ್ಯ ಬೆಂಗಳೂರು,ಮೇ,27,2023(..):ಪೂರ್ಣ ಪ್ರಮಾಣದ ಸಂಪುಟ ರಚನೆ ಆಗಿದೆ. ನಾಳೆ ಖಾತೆ ಹಂಚಿಕೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಬಳಿಕ ಸಚಿವ ಸಂಪುಟ ಸಭೆ ನಡೆಸಿ ನಂತರ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಕೆಲವು ಮಾನದಂಡಗಳ ಆಧಾರದಲ್ಲಿ ಸಂಪುಟ ವಿಸ್ತರಣೆ ಮಾಡಲಾಗಿದೆ. ಮುಂದಿನ ಸಂಪುಟದಲ್ಲಿ ಐದು ಗ್ಯಾರಂಟಿ ಜಾರಿ ಮಾಡುತ್ತೇವೆ. ಈ ಹಿಂದೆಯೂ ಕೊಟ್ಟ ಭರವಸೆಯನ್ನು ಈಡೇರಿಸಿದ್ದೇವೆ. ಈಗಲೂ ನಾವು ಜನರಿಗೆ ಕೊಟ್ಟ ಭರವಸೆ ಈಡೇರಿಸುತ್ತೇವೆ. ವಿರೋಧ ಪಕ್ಷದವರು ಜನರಿಗೆ ಕೊಟ್ಟ ಭರವಸೆ ಈಡೇರಿಸಿರಲಿಲ್ಲ ಎಂದರು. ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂದು ಸಿದ‍್ಧರಾಮಯ್ಯ ತಿಳಿಸಿದರು. : - --