ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಬೆಂಗಳೂರು,ಆಗಸ್ಟ್,23,2024 (..):ರಾಜ್ಯದಲ್ಲಿ ಕೆಲ ಕಾಲ ಬಿಡುವು ನೀಡಿದ್ದ ಮಳೆರಾಯ ಮತ್ತೆಅಬ್ಬರಿಸಲಿದ್ದಾರೆ. ಆಗಸ್ಟ್ 26ರ ಬಳಿಕ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಲಿದ್ದು ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ದಕ್ಷಿಣ ಕನ್ನಡ ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯಂತೆ ಸೂಚನೆ ನೀಡಲಾಗಿದೆ. : , ,