ಪ್ರಧಾನಿಯವರಿಂದ ನೂತನ ಸಂಸತ್ ಭವನ ಉದ್ಘಾಟನೆ ಪ್ರಶ್ನಿಸಿ ಸಲ್ಲಿಸಿದ್ಧ ಪಿಐಎಲ್ ವಜಾಗೊಳಿಸಿದ ಸುಪ್ರೀಂಕೋರ್ಟ್. ನವದೆಹಲಿ,ಮೇ,26,2023(..):ಪ್ರಧಾನಿಯವರಿಂದ ನೂತನ ಸಂಸತ್ ಭವನ ಉದ್ಘಾಟನೆ ಪ್ರಶ್ನಿಸಿ ಸಲ್ಲಿಸಿದ್ಧ ಪಿಐಎಲ್ ಅನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ದೆಹಲಿಯಲ್ಲಿನ ನೂತನ ಸಂಸತ್ ಭವನವನ್ನ ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ. ಈ ನಡುವೆ ಪ್ರಧಾನಿಯವರಿಂದ ನೂತನ ಸಂಸತ್ ಭವನ ಉದ್ಘಾಟನೆ ಪ್ರಶ್ನಿಸಿ ವಕೀಲ ಜಯಾ ಸುಕಿನ್ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ವಿಚಾರದಲ್ಲಿ ಮಧ್ಯಪ್ರವೇಶಿಸಲ್ಲ. ಈ ವಿಷಯಗಳನ್ನು ಪರಿಶೀಲಿಸುವುದು ನ್ಯಾಯಾಲಯದ ಕಾರ್ಯವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್ ಪಿಐಎಲ್ ಅನ್ನು ವಜಾಗೊಳಿಸಿದೆ. : - – - – – - .