ಆರ್ ಎಸ್ ಎಸ್ ಗೆ ಕೈ ಹಾಕಿದ್ರೆ ಕಾಂಗ್ರೆಸ್ ಇರಲ್ಲ ಎಂದಿದ್ದ ನಳೀನ್ ಕುಮಾರ್ ಕಟೀಲ್ ಗೆ ತಿರುಗೇಟು ಕೊಟ್ಟ ಕಾಂಗ್ರೆಸ್ . ಬೆಂಗಳೂರು,ಮೇ,26,2023(..):ಆರ್ ಎಸ್ ಎಸ್ ಗೆ ಕೈ ಹಾಕಿದ್ರೆ ಕಾಂಗ್ರೆಸ್ ಇರಲ್ಲ ಎಂದು ಹೇಳಿಕೆ ನೀಡಿದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಕಾಂಗ್ರೆಸ್ ಟ್ವಿಟ್ ಮಾಡಿ ತಿರುಗೇಟು ನೀಡಿದೆ. ಈ ಕುರಿತು ಟ್ವಿಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ಭಾರತದಲ್ಲಿ ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು. ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂಬ ಸರ್ಟಿಫಿಕೇಟ್ ನೀಡಿದ್ದರು. ಕಾಂಗ್ರೆಸ್ ಆಗಲೂ ಇತ್ತು ಈಗಲೂ ಇದೆ, ಮುಂದೆಯೂ ಇರಲಿದೆ. ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು ಎಂದು ತಿಳಿಸಿದೆ. ಆರ್​ಎಸ್​ಎಸ್​ ನಿಷೇಧ ಬಗ್ಗೆ ಪ್ರಿಯಾಂಕ್ ಖರ್ಗೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ್ದ ನಳಿನ್ ಕುಮಾರ್​ ಕಟೀಲ್, ಪ್ರಧಾನಿ, ಕೇಂದ್ರ ಸಚಿವರು, ನಾವೆಲ್ಲರೂ ಆರ್ ಎಸ್ ಎಸ್‍ ​ನಿಂದ ಬಂದವರು. ಆರ್​ಎಸ್​ಎಸ್​​​​ ಈ ದೇಶದಲ್ಲಿ ರಾಷ್ಟ್ರ ಭಕ್ತಿ ಕಲಿಸಿದೆ. ನೆಹರೂ, ಇಂದಿರಾ ಎಲ್ಲರೂ ನಿಷೇಧಕ್ಕೆ ಕೈಹಾಕಿ ಕೈಸುಟ್ಟುಕೊಂಡಿದ್ದಾರೆ. ಬಜರಂಗದಳ, ಆರ್ ಎಸ್ ಎಸ್ ನಿಷೇಧಕ್ಕೆ ಕೈಹಾಕಿದರೆ ಕಾಂಗ್ರೆಸ್ ಇರುವುದಿಲ್ಲ ಎಂದು ಎಚ್ಚರಿಸಿದ್ದರು. : – –